ಸಿದ್ದರಾಮಯ್ಯರನ್ನ ನಿಮ್ಹಾನ್ಸ್​​​ಗೆ ಸೇರಿಸಿದರೆ ಮಾತ್ರ ಕಾಂಗ್ರೆಸ್‌ಗೆ ಉಳಿಗಾಲ: ಶೋಭಾ

ಚಿಕ್ಕೋಡಿ: ನರೇಂದ್ರ ಮೋದಿ ನಾಲಾಯಕ್ ಪ್ರಧಾನಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಕಾಂಗ್ರೆಸ್ ಉಳಿಯಬೇಕಿದ್ದರೆ, ಸಿದ್ದರಾಮಯ್ಯರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಶೋಭಾ ಕಿಡಿಕಾರಿದ್ದಾರೆ.

ನಗರದಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಪರ ಪ್ರಚಾರ ರ‌್ಯಾಲಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ನಾಲಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಮನಿರಸನರಾಗಿ ಮಾತಾಡ್ತಿದ್ದಾರೆ ಅಂತಾ ಬಾಯಿ ತಪ್ಪಿ ಹೇಳಿದ್ರು.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv