ಲೋಕಸಭಾ ಚುನಾವಣೆಗೆ ಸ್ಪರ್ಧಿಸಬಾರದು ಅಂದುಕೊಂಡಿದ್ದೆ: ಸಂಸದೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಅಂದುಕೊಂಡಿದ್ದೆ. ಆದ್ರೆ, ವರಿಷ್ಠರು ಈ ಹಂತದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳದಂತೆ ಸೂಚಿಸಿದ್ದಾರೆ. ನಾನು ಪಕ್ಷದ ಆದೇಶದಂತೆಯೇ ನಡೆದುಕೊಳ್ಳುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮೂಡಿಗೆರೆಯಲ್ಲಿ ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಮಾತನಾಡಿದ ಅವರು, ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಶಿವಮೊಗ್ಗ, ಬಳ್ಳಾರಿ, ಮಂಡ್ಯ ಮೂರು ಕಡೆ ಬಿಜೆಪಿ ಗೆಲ್ಲುತ್ತದೆ. ಈ ಮೂಲಕ ಬಿಜೆಪಿಗೆ ಜನ ಬೆಂಬಲ ಇದೆ ಎಂಬುದು ಸಾಬೀತಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.
ಇದೇ ವೇಳೆ ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಇದೆಯೇ ಎಂದು ಪ್ರಶ್ನಿಸಿದ್ರು. ಮೊದಲ ದಿನದಿಂದಲೂ ಗೊಂದಲದಲ್ಲಿಯೇ ಸರ್ಕಾರ ನಡೆಯುತ್ತಿದೆ. ಕಾಂಗ್ರೆಸ್, ಜೆಡಿಎಸ್ ಒಳಗಡೆಯೇ ಸಾಕಷ್ಟು ಭಿನ್ನಾಭಿಪ್ರಾಯವಿದೆ. ಅಧಿಕಾರಿಗಳ ವರ್ಗಾವಣೆ ಹಾಗೂ ದೇವಸ್ಥಾನ ಸುತ್ತುವುದರಲ್ಲೇ ಕಾಲ ಕಳೆಯಲಾಗುತ್ತಿದೆ. ಬದಲಾಗಿ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದು ಸಿಎಂ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್​ ನೀಡಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv