ಹೆರಿಗೆ ವಾರ್ಡ್​ನಲ್ಲಿ ಬೆಂಕಿ​: ಬಾಣಂತಿಯರು ಅಪಾಯದಿಂದ ಪಾರು

ಬಳ್ಳಾರಿ: ಕೊಟ್ಟೂರಿನ ಸಮುದಾಯ ಆರೋಗ್ಯ ಕೇಂದ್ರದ ಹೆರಿಗೆ ವಾರ್ಡ್​ನಲ್ಲಿ ವಿದ್ಯುತ್​​ ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸ್ಥಳದಲ್ಲಿದ್ದ ಬಾಣಂತಿಯರು ಮಗುವನ್ನು ಎತ್ತಿಕೊಂಡು ಅಪಾಯದಿಂದ ಪಾರಾಗಿದ್ದಾರೆ. ಬೆಂಕಿ ಹೊತ್ತಿಕೊಳ್ಳುವುದನ್ನು ನೋಡುತ್ತಿದ್ದಂತೆ ಬಾಣಂತಿಯರು ಹೊರಗೆ ಹೋಗಿರುವುದರಿಂದಾಗಿ ಯಾವುದೇ ಅನಾಹುತ ನಡೆದಿಲ್ಲ. ಆಸ್ಪತ್ರೆಯ ಸಿಬ್ಬಂದಿಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv