ಗಣಿ-ಧಣಿ ಗ್ರಾಮ ವಾಸ್ತವ್ಯ.. ಪೂಜೆ, ಪುನಸ್ಕಾರ ಇತ್ಯಾದಿ.. ಇತ್ಯಾದಿ..

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಶಾಸಕ ಶ್ರೀರಾಮುಲು ತಮ್ಮ ಕ್ಷೇತ್ರ ವ್ಯಾಪ್ತಿಯ ನೆಲಗೇತನ ಹಟ್ಟಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದರು. ರಾತ್ರಿ ದಲಿತ ಕಾಲೋನಿಯ ದುರುಗಪ್ಪ ಎಂಬುವರ ಗುಡಿಸಲಿನಲ್ಲಿ ವಾಸ್ತವ್ಯ ಹೂಡಿದ್ದ ಗಣಿ-ಧಣಿ,  ಬೆಳಗ್ಗೆ 5.45 ಕ್ಕೆ ನಿದ್ದೆಯಿಂದ ಎಚ್ಚರವಾಗಿ ಬೆಂಬಲಿಗರೊಂದಿಗೆ ವಾಯುವಿಹಾರಕ್ಕೆ ತೆರಳಿದ್ದರು. ಬಳಿಕ ದುರುಗಪ್ಪ ಮನೆಯಲ್ಲೇ ಶ್ರೀರಾಮುಲು ಲಿಂಗ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಮುಂದಿನ ಐದು ವರ್ಷಗಳ ಕಾಲ ಗ್ರಾಮವಾಸ್ತವ್ಯ ಕಾರ್ಯಕ್ರಮ ಮುಂದುವರಿಸೋದಾಗಿ ಹೇಳಿದರು. ಇದೇ ವೇಳೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಶಾಸಕ ಶ್ರೀರಾಮುಲು ತರಾಟೆ ತೆಗೆದುಕೊಂಡರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ನಿಷ್ಕ್ರೀಯಗೊಂಡಿದೆ. ಕೇವಲ ಬಿಜೆಪಿಗೆ ಅಧಿಕಾರ ತಪ್ಪಿಸಲು ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ಒಂದು ವೇಳೆ ಸಮ್ಮಿಶ್ರ ಸರ್ಕಾರ ಅಸ್ತಿರಗೊಂಡರೇ ಏನಾಗುತ್ತೊ ಗೊತ್ತಿಲ್ಲ. ಬಿಜೆಪಿ ನಾಯಕರು ಸ್ವತಂತ್ರ ಅಭ್ಯರ್ಥಿಗಳ ಜೊತೆ ಸಂಪರ್ಕದಲ್ಲಿದ್ದೇವೆ ಅಂತಾ ಹೇಳಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv