ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ ಆತಂಕ ಬೇಡ: ಸಿಎಂ ಕುಮಾರಸ್ವಾಮಿ

ಚಿಕ್ಕಮಗಳೂರು: ಸಿದ್ದಗಂಗಾ ಡಾ.ಶಿವಕುಮಾರ ಶ್ರೀಗಳ ಆರೋಗ್ಯದ ಬಗ್ಗೆ ಜನರಿಗೆ ಆತಂಕ ಬೇಡ. ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಶ್ರೀಗಳಿಗೆ ಬಿಟ್ಟು-ಬಿಟ್ಟು ಸ್ವಲ್ಪ ಜ್ವರ ಬರುತ್ತಿದೆ. ಶ್ರೀಗಳ ಆರೋಗ್ಯದ ಪಿನ್​ ಟು ಪಿನ್​ ಮಾಹಿತಿ ತರಿಸಿಕೊಳ್ಳುತ್ತಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್​​.ಡಿ. ಕುಮಾರಸ್ವಾಮಿ ಹೇಳಿದರು.
ಶೃಂಗೇರಿಯಲ್ಲಿ ಮಾತನಾಡಿದ ಅವರು, ಶ್ರೀಗಳ ಆರೋಗ್ಯಗ ಬಗ್ಗೆ ಮಠದ ಕಿರಿಯ ಸ್ವಾಮೀಜಿ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಹೆಚ್ಚಿನ ಚಿಕಿತ್ಸೆ ಅನಿವಾರ್ಯತೆ ಇದ್ದರೆ ಆಸ್ಪತ್ರೆಗೆ ದಾಖಲು ಮಾಡಲು ಹೇಳಿದ್ದೇನೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸರಿಗೆ ಎಲ್ಲಾ ರೀತಿಯ ಸಹಕಾರಕ್ಕೆ ಸೂಚಿಸಿದ್ದೇನೆ. ಯಾರೂ ಗಾಬರಿಪಡುವ ಅಗತ್ಯವಿಲ್ಲ. ಶ್ರೀಗಳು ನಮ್ಮೊಂದಿಗೆ ಇನ್ನೂ ಇರಬೇಕೆಂದು ಶಾರದಾಂಬೆಗೆ ಬೇಡಿಕೊಳ್ಳುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ.