ಸಿದ್ದಗಂಗಾ ಶ್ರೀಗಳಿಗೆ ಮಹಾನಗರ ಪಾಲಿಕೆಯಿಂದ ಶ್ರದ್ಧಾಂಜಲಿ

ದಾವಣಗೆರೆ: ಸಿದ್ದಗಂಗಾ ಶ್ರೀಗಳು ದೈವಾಧೀನರಾದ ಹಿನ್ನೆಲೆಯಲ್ಲಿ ಇಲ್ಲಿನ ನಗರದ ಮಹಾನಗರ ಪಾಲಿಕೆ ಸಂತಾಪ ಸೂಚಿಸಿತು. ಪಾಲಿಕೆ ಸಭಾಂಗಣದಲ್ಲಿ ಡಾ.ಶಿವಕುಮಾರ ಸ್ವಾಮೀಜಿಗಳ ಭಾವ ಚಿತ್ರ ಇಟ್ಟು ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಪಾಲಿಕೆಯ ಎಲ್ಲಾ ಸದಸ್ಯರು, ಕಾರ್ಪೋರೆಟರ್​ಗಳು ಭಾಗಿಯಾಗಿದ್ದರು. ಕೆಲ ತಿಂಗಳುಗಳಿಂದ ಬಳಲುತ್ತಿದ್ದ ಸಿದ್ದಗಂಗಾ ಶ್ರೀಗಳು ಇಂದು ಕೊನೆಯುಸಿರೆಳೆದಿದ್ದಾರೆ. ಇನ್ನು ಶ್ರೀಗಳ ಅಂತ್ಯಸಂಸ್ಕಾರ ನಾಳೆ ನಡೆಯಲಿದೆ.