ಕಕ್ಕರಗೊಳ್ಳ ಗ್ರಾಮದಲ್ಲಿ ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆ

ದಾವಣಗೆರೆ: ದಾವಣಗೆರೆಯ ಕಕ್ಕರಗೊಳ್ಳ ಗ್ರಾಮದಲ್ಲಿ ಇಂದು ಲಿಂಗೈಕ್ಯ ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆ ಹಮ್ಮಿಕೊಳ್ಳಲಾಗಿತ್ತು. ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆ ಆಯೋಜನೆ ಮಾಡಲಾಗಿತ್ತು. ಈ ವೇಳೆ ಗ್ರಾಮಸ್ಥರು ಸಿದ್ದಗಂಗಾ ಶ್ರೀಗಳ ಭಾವಚಿತ್ರ ಹೊತ್ತು ಮೆರವಣಿಗೆ ನಡೆಸಿದ್ರು. ಇಡೀ ಗ್ರಾಮವೇ ಶ್ರೀಗಳ ಪುಣ್ಯ ಆರಾಧನೆಯಲ್ಲಿ ಪಾಲ್ಗೊಂಡಿತ್ತು.

ಇನ್ನು ದಾವಣಗೆರೆಯ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯಿಂದ ಸಿರಿಧಾನ್ಯಗಳನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ಸಿದ್ದಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೊಜಾ ಹೇಳಿದರು. ಜನವರಿ 31ರಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಪುಣ್ಯಸ್ಮರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆಯ ಸಿದ್ದಗಂಗಾ ವಿದ್ಯಾಸಂಸ್ಥಯಿಂದ ಸುಮಾರು 11.50 ಟನ್ ಅಕ್ಕಿಯನ್ನು ಕಳಿಸಿಕೊಡಲಾಗುತ್ತಿದೆ. ಸಂಸ್ಥೆಯ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಪೋಷಕರು ನೆರವು ನೀಡುತ್ತಿದ್ದಾರೆ ಎಂದು ಜಸ್ಟಿನ್ ಡಿಸೋಜಾ ತಿಳಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv