ಸಿದ್ದಾಪುರ ಎಪಿಎಂಸಿ ಮತ್ತೆ ಕಾಂಗ್ರೆಸ್ ತೆಕ್ಕೆಗೆ

ಸಿದ್ದಾಪುರ: ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿಂದಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷರೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಸಿದ್ದಾಪುರ ಎಪಿಎಂಸಿ ಮತ್ತೆ ಕಾಂಗ್ರೆಸ್ ತೆಕ್ಕೆಗೆ ಜಾರಿದೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಈ ಸಂದರ್ಭದಲ್ಲಿ 11 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ 2 ನಾಮಪತ್ರಗಳು ಮಾತ್ರ ಸಲ್ಲಿಕೆಯಾಗುವುದರೊಂದಿಗೆ ಅವಿರೋಧವಾಗಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು. ಮಧ್ಯಾಹ್ನ 1 ಗಂಟೆಗೆ ಚುನಾವಣಾಧಿಕಾರಿ ಸಿದ್ದಾಪುರ ತಹಶೀಲ್ದಾರ್ ಪಟ್ಟರಾಜ ಗೌಡ ಅಧಿಕೃತ ಫಲಿತಾಂಶ ಪ್ರಕಟಿಸಿದರು. ಕಾಂಗ್ರೆಸ್​ನ ಕೆ. ಜಿ. ನಾಗರಾಜ್​ ಅಧ್ಯಕ್ಷರಾಗಿ ಹಾಗೂ ವಿಜಯಲಕ್ಷ್ಮಿ ಭಟ್ಟ ಉಪಾಧ್ಯಕ್ಷರಾಗಿ ಮತ್ತೊಮ್ಮೆ ಅಧಿಕಾರ ಸ್ವೀಕರಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv