ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಮತದಾನ

ಚಿಕ್ಕಮಗಳೂರು: ಜಿಲ್ಲೆಯ 20 ಮತಗಟ್ಟೆ ಕೇಂದ್ರಗಳಲ್ಲಿ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಪದವೀಧರ ಕ್ಷೇತ್ರಕ್ಕೆ 12 ಹಾಗೂ ಶಿಕ್ಷಕರ ಕ್ಷೇತ್ರಕ್ಕೆ 8 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ. ನಗರದ ಮಿನಿ ವಿಧಾನ ಸೌಧ ಹಾಗೂ ಜೂನಿಯರ್ ಕಾಲೇಜಿನಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಿನಿ ವಿಧಾನ ಸೌಧದಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಮತದಾನ ಮಾಡಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv