ಆರ್‌ಬಿಐನ ಕೇಂದ್ರೀಯ ವಿದ್ಯಾಲಯದಲ್ಲಿ ನಾಗರ ಹಾವು ಪ್ರತ್ಯಕ್ಷ

ಮೈಸೂರು: ಮೈಸೂರಿನ ಆರ್‌ಬಿಐನಲ್ಲಿರೋ ಕೇಂದ್ರೀಯ ವಿದ್ಯಾಲಯದಲ್ಲಿ ನಾಗರ ಹಾವೊಂದು ಪ್ರತ್ಯಕ್ಷವಾಗಿದೆ. ಪ್ರಾಂಶುಪಾಲರ ಕಚೇರಿಯಲ್ಲಿ ನಾಗರಾಜನ ಕಂಡು ಸಂಸ್ಥೆ ಸಿಬ್ಬಂದಿ ಬೆಚ್ಚು ಬಿದ್ದಿದ್ದಾರೆ. ವಿದ್ಯಾರ್ಥಿಗಳು ಆಗಮನಕ್ಕೂ ಮೊದಲೇ ನಾಗರಹಾವು ಪ್ರತ್ಯಕ್ಷವಾಗಿದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಉರುಗ ತಜ್ಞ ಕೆಂಪರಾಜುಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಕೆಂಪರಾಜು ನಾಗರಹಾವನ್ನು ಹಿಡಿದು, ಅದನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ನಾಗರಹಾವು ರಕ್ಷಣೆಯಿಂದ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv