ಸಮಾಜ ಸೇವಕರಿಗೆ ಆಸ್ಟ್ರೇಲಿಯಾ ಕನ್ನಡ ಸಂಘದಿಂದ ಸನ್ಮಾನ

ಮೆಲ್ಬೋರ್ನ್: ಸಮಾಜದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಆಸ್ಟ್ರೇಲಿಯಾ ಬಸವ ಸಮಿತಿ ಮತ್ತು ಆಸ್ಟ್ರೇಲಿಯಾ ಕನ್ನಡ ಸಂಘ ವತಿಯಿಂದ ಮೆಲ್ಬೋರ್ನ್ ಸಿಟಿಯಲ್ಲಿ ಸನ್ಮಾನಿಸಲಾಯಿತು. ಕನ್ನಡಿಗ ಶ್ರೀ ಸಾಯಿ ಅಶೋಕ್ ಕುಮಾರ್ ಸೇರಿದಂತೆ ಹಲವು ಗಣ್ಯರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ಕನ್ನಡ ಸಂಘದ ಅಧ್ಯಕ್ಷ ಚಂದ್ರಶೇಖರ್ ರಾವ್, ಶ್ವಾಸಗುರು ಶ್ರೀ ವಚನಾನಂದ ಸ್ವಾಮೀಜಿ, ಆಸ್ಟ್ರೇಲಿಯಾ ಪಾರ್ಲಿಮೆಂಟ್ ಸದಸ್ಯೆ ಕೌಸಲ್ಯಾ ವಾಘೆ ಮತ್ತು ಮಾಜಿ ಉಪರಾಷ್ಟ್ರಪತಿ ದಿವಂಗತ ಬಿ.ಡಿ ಜತ್ತಿ ಪುತ್ರ ಅರವಿಂದ ಜತ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv