ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಸೋಮಣ್ಣ ಬೇವಿನಮರದ್

ಹಾವೇರಿ: ಬಿಜೆಪಿ ಟಿಕೆಟ್​​ ಕೈ ತಪ್ಪಿದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ವಿಧಾನ ಪರಿಷತ್​​​ ಸದಸ್ಯ ಸೋಮಣ್ಣ ಬೇವಿನಮರದ್ ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ವಿರುದ್ಧ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಸೋಮಣ್ಣ ಬೇವಿನಮರದ್, ನಿನ್ನೆ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಪರಿಷತ್​​ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇಂದು ಶಿಗ್ಗಾಂವಿಯ ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

Leave a Reply

Your email address will not be published. Required fields are marked *