ಶೀಘ್ರದಲ್ಲೇ ರೈತರ ಸಾಲ ಮನ್ನಾ ಆಗಲಿದೆ: ರಮೇಶ್​​ ಜಾರಕಿಹೊಳಿ

ರಾಯಚೂರು: ಮುಂದಿನ ತಿಂಗಳು 5ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸಾಲ ಮನ್ನಾ ಬಗ್ಗೆ ಘೋಷಣೆ ಮಾಡಲಿದ್ದಾರೆ ಅಂತಾ ಪೌರಾಡಳಿತ ಸಚಿವ ರಮೇಶ್​​ ಜಾರಕಿಹೊಳಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ರೈತರ ಸಾಲ ಮನ್ನಾ ಆಗಲಿದೆ ಎಂದರು. ಅಲ್ಲದೇ ಪೌರಾಡಳಿತ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅದರ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ. ಇಲಾಖೆಯಿಂದ ಜನರಿಗೆ ಅನುಕೂಲ ಆಗಬೇಕಿದೆ ಎಂದರು.
ಇನ್ನೂ ರಾಯಚೂರು ನಗರ ಸಭೆಯಲ್ಲಿ ನಡೆದ ಭ್ರಷ್ಟಾಚಾರದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತೆ ಎಂದು ತಿಳಿಸಿದರು. ಪೌರಾಡಳಿತ ಇಲಾಖೆಯ ಗುಲ್ಬರ್ಗ ವಿಭಾಗದ ಪ್ರಗತಿ ಪರಿಶೀಲನೆ ಸಭೆ ನಡೆಸಲು ಸಚಿವರು ಜಿಲ್ಲೆಗೆ ಆಗಮಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv