ಶ್ರೀಲಂಕಾಗೆ ಕರಾಳ ಭಾನುವಾರ; ಮೃತರ ಸಂಖ್ಯೆ 207ಕ್ಕೆ ಏರಿಕೆ, 7 ಶಂಕಿತರ ಅರೆಸ್ಟ್

ಕೊಲಂಬೊ: ಶ್ರೀಲಂಕಾದಲ್ಲಿ ನಡೆದ ಸರಣಿ ಸ್ಫೋಟ ಸಂಬಂಧ 7 ಶಂಕಿತರನ್ನ ಬಂಧಿಸಲಾಗಿದೆ. ಶ್ರೀಲಂಕಾ ರಕ್ಷಣಾ ಸಚಿವ ರುವನ್ ವಿಜೇವರ್ದನೆ  ಈ ಬಗ್ಗೆ ಮಾಹಿತಿ ನೀಡಿದ್ದು, ಸ್ಫೋಟ ಪ್ರಕರಣ ಸಂಬಂಧ 7 ಮಂದಿಯನ್ನ ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದಿದ್ದಾರೆ.

ಅಲ್ಲದೇ ನಿರ್ದಿಷ್ಟ ಒಂದು ಸಂಘಟನೆ ಒಂದು ಆತ್ಮಹತ್ಯೆ ದಾಳಿ ನಡೆಸಿರಬಹುದು. ಸಾವು, ನೋವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಘಟನಾ ಸ್ಥಳ ಹಾಗೂ ವಿವಿಧ ಆಸ್ಪತ್ರೆಗಳಲ್ಲಿ ಮೃತಪಟ್ಟವರ ಸಂಖ್ಯೆ 207ಕ್ಕೇ ಏರಿದೆ. ಜೊತೆಗೆ 450ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಅಂತಾ ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಕೊಲಂಬೊ ರಾಷ್ಟ್ರೀಯ ಆಸ್ಪತ್ರೆಯಲ್ಲಿ 66 ಮಂದಿ ಮೃತಪಟ್ಟು 260 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನೆಗೊಂಬೊ ಆಸ್ಪತ್ರೆಯಲ್ಲಿ 104 ಮಂದಿ ಮೃತಪಟ್ಟಿದ್ದು, 100ಕ್ಕೂ ಹಚ್ಚು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಲುಬೊವಿಲಾ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದು, 6 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಟ್ಟಿ ಆಸ್ಪತ್ರೆಯಲ್ಲಿ 28 ಮಂದಿ ಸಾವನ್ನಪ್ಪಿದ್ದು, 51 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಗಮಾ ಆಸ್ಪತ್ರೆಯಲ್ಲಿ 7 ಮಂದಿ ಮೃತಪಟ್ಟಿದ್ದು, 32 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv