ಎಲ್​.ಚಂದ್ರಶೇಖರ್ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಚುನಾವಣಾ ಕಣದಿಂದ ಹಿಂದೆ ಸರಿದ ಎಲ್​.ಚಂದ್ರಶೇಖರ್, ಈಗ ಕಾಂಗ್ರೆಸ್ ಸೇರಿರುವ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿದೆ. ಎಸ್.ಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಚಿ.ನಾ.ರಾಮು, ರಾಮನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಶ್ರೀ ಸಚ್ಚಿದಾನಂದ, ರಾಜ್ಯ ಬಿಜೆಪಿ ವಕ್ತಾರರಾದ ಶ್ರೀ ಅಶ್ವಥ್ ನಾರಾಯಣ್, ಮಾಜಿ ಉಪ ಮೇಯರ್ ಶ್ರೀ ಎಸ್.ಹರೀಶ್ ಮತ್ತು ಇತರ ಮುಖಂಡರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಚಂದ್ರಶೇಖರ್​​ ಬಿಜೆಪಿಯಿಂದ ಬಿ-ಫಾರಂ ಪಡೆದು ಈಗ ಏಕಾಏಕಿ ಚುನಾವಣೆಯಿಂದ ಹಿಂದೆ ಸರಿದು ಕಾಂಗ್ರೆಸ್​-ಜೆಡಿಎಸ್​ಗೆ ಬೆಂಬಲ ಸೂಚಿಸಿದ್ದಾರೆ. ಇದು ಕಾನೂನು ಬಾಹಿರವಾಗಿದೆ. ಈ ಸಂಬಂಧ ನಿನ್ನೆ ರಾತ್ರಿಯೇ ರಾಷ್ಟ್ರೀಯ ಚುನಾವಣಾ ಆಯೋಗಕ್ಕೆ ಇ-ಮೇಲ್ ಮೂಲಕ ದೂರು ಸಲ್ಲಿಸಲಾಗಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv