‘ಸಾಲ ಮನ್ನಾ ಮಾಡದೆ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡಿದೆ’

ಹುಬ್ಬಳ್ಳಿ: ಸಾಲ ಮನ್ನಾ ಮಾಡದೆ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡಿದೆ ಅಂತ ಜಯಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಕೊಟ್ಟ ಮಾತು ಉಳಿಸಿಕೊಳ್ಳದೆ ರೈತರಿಗೆ ದ್ರೋಹ ಮಾಡಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ರು. ಬಜೆಟ್‌ನಲ್ಲಿ 2,900 ಕನ್ನಡ ಶಾಲೆಗಳನ್ನ ಮುಚ್ಚುವುದಾಗಿ ಹೇಳಿದ್ದಾರೆ. ಇದರಿಂದ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಬಹಳಷ್ಟು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಆದ್ದರಿಂದ ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯಬೇಕು ಅಂತ ಆಗ್ರಹಿಸಿದರು.
ಕಳಸಾ-ಬಂಡೂರಿ ಹೋರಾಟ ಸತತ ನಾಲ್ಕು ವರ್ಷದಿಂದ ನಡೆಯುತ್ತಿದೆ. ಆದರೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಈ ಬಗ್ಗೆ ಕಣ್ತೆರೆದು ನೋಡುತ್ತಿಲ್ಲ. ಈ ಮೂಲಕ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸರ್ಕಾರ ನಿಷ್ಕಾಳಜಿ ತೋರಿಸುತ್ತಿದೆ ಅಂತ ಸ್ಪಷ್ಟಪಡಿಸುತ್ತಿದ್ದಾರೆ. ಸರ್ಕಾರ ಈ ನಿಲುವನ್ನ ಖಂಡಿಸಿ ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ ಅಂತ ಎಚ್ಚರಿಕೆ ನೀಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv