ಬೆಳಗಾವಿಯಲ್ಲಿ ವಾಹನಗಳ ಮೇಲೆ ಕಲ್ಲು ತೂರಾಟ

ಬೆಳಗಾವಿ: ನಿನ್ನೆ ತಡರಾತ್ರಿ ಎರಡು ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಗೋವಾಕ್ಕೆ ತೆರಳುತ್ತಿದ್ದ ವಾಹನಗಳಲ್ಲಿ ಅಕ್ರಮ‌ವಾಗಿ ಗೋಮಾಂಸ ಸಾಗಿಸಲಾಗುತ್ತಿದೆ ಎಂದು ಆರೋಪಿಸಿ ಸಂಘಟನೆಯೊಂದರ ಕಾರ್ಯಕರ್ತರು, ವಾಹನಗಳ ಮೇಲೆ ಕಲ್ಲು ತೂರಿದ್ದಾರೆ.

ನಗರದ ಮೂರನೇ ಗೇಟ್​ ಬಳಿ, ದಾಳಿ ನಡೆಸಿದ ಕಾರ್ಯಕರ್ತರು, ಚಾಲಕರ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಉದ್ಯಮಬಾಗ​​ ಪೊಲೀಸರು ಭೇಟಿಕೊಟ್ಟಿದ್ದು, ಬಿಗಿ ಬಂದೋಬಸ್ತ್​ ಮಾಡಿದ್ದಾರೆ.
ಮತ್ತೊಂದೆಡೆ ಶಾಸಕರಾದ ಅನಿಲ್ ಬೆನಕೆ ಹಾಗೂ ಅಭಯ್ ಪಾಟೀಲ್​​​ ಸ್ಥಳಕ್ಕೆ ಭೇಟಿ ನೀಡಿದರಲ್ಲದೇ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಲಿಸರಿಗೆ ಒತ್ತಾಯಿಸಿದ್ರು.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv