ದೇವಸ್ಥಾನದ ಗೋಡೆ ಕುಸಿದು ವಿದ್ಯಾರ್ಥಿನಿ ಸಾವು

ಉಡುಪಿ: ವಿದ್ಯಾರ್ಥಿನಿ ಮೇಲೆ ಆವರಣದ ಗೋಡೆ ಕುಸಿದು ಬಿದ್ದ ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಳ್ಳೂರಿನಲ್ಲಿ ನಡೆದಿದೆ. ನಂದಿಕೇಶ್ವರ ದೇವಸ್ಥಾನದ ಸಮೀಪ ವಿದ್ಯಾರ್ಥಿನಿ ಹಾದುಹೋಗುತ್ತಿದ್ದಾಗ ದೇವಸ್ಥಾನದ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಧನ್ಯ ಎಂದು ಗುರುತಿಸಲಾಗಿದ್ದು, ಮಾನಸ ಗಂಗೋತ್ರಿಯಲ್ಲಿ ಎಂಎಸ್ಸಿ ವಿದ್ಯಾರ್ಥಿನಿಯಾಗಿದ್ದಳೆಂದು ತಿಳಿದು ಬಂದಿದೆ.

ನಿಮ್ಮ ಸಲಹೆ, ಸೂಚನೆ ಮತ್ತ ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv