ಬಾವಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

ಬೆಂಗಳೂರು:  ಈಜಲು ಹೋದ ವಿದ್ಯಾರ್ಥಿಯೊಬ್ಬ ಬಾವಿಯಲ್ಲಿ ಮುಳಗಿ ಸಾವನ್ನಪ್ಪಿರೋ ಘಟನೆ ಯಲಹಂಕದ ವೆಂಕಟಾಲ ಬಳಿ ನಡೆದಿದೆ. ದರ್ಶನ್ (14 ) ಮೃತ ವಿದ್ಯಾರ್ಥಿ.

ಇವತ್ತು ಮಧ್ಯಾಹ್ನ 1 ಗಂಟೆ ಸುಮಾರಿಗೆ ದರ್ಶನ್, ತನ್ನ ಸ್ನೇಹಿತರ ಜೊತೆ ಈಜಲು ಬಾವಿಗೆ ತೆರಳಿದ್ದ. ಈ ವೇಳೆ ಈಜು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಸದ್ಯ ಮೃತದೇಹವನ್ನ ಹತ್ತಿರದ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv