ಕೂಡಲೇ ಬಸ್​ ಪಾಸ್​ ವಿತರಣೆಗೆ ಒತ್ತಾಯಿಸಿ ಪ್ರೊಟೆಸ್ಟ್​​

ಯಾದಗಿರಿ: ಕೂಡಲೇ ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ ಸಂಘಟನೆ ವತಿಯಿಂದ ಬಸ್​​ ನಿಲ್ದಾಣದ ಬಳಿ ಬಸ್​ ತಡೆದು ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವಲ್ಲಿ ವಿಫಲವಾಗಿದೆ. ಅಂತಾ ಆರೋಪಿಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಲಕ್ಷಾಂತರ ವಿದ್ಯಾರ್ಥಿಗಳು ಉಚಿತ ಬಸ್​ ಪಾಸ್​ನ್ನೇ ಎದುರು ನೋಡುತ್ತಿದ್ದಾರೆ. ಕೂಡಲೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಕೆಎಸ್ಆರ್​​​​​ಟಿಸಿ ಅಧಿಕಾರಿಗೆ ಮನವಿ ಸಲ್ಲಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv