ಎಲ್ಲ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಸ್​ ಪಾಸ್​​ ನೀಡಿ: ಎಬಿವಿಪಿ ಪ್ರತಿಭಟನೆ

ಧಾರವಾಡ: ರಾಜ್ಯದ ಎಲ್ಲ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ ನೀಡಬೇಕೆಂದು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಧಾರವಾಡದ ಜಿಲ್ಲಾಧಿಕಾರಿ ಕಛೇರಿ ಎದುರು ಇಂದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಉಚಿತ ಬಸ್​ ಪಾಸ್ ನೀಡುವಂತೆ ಆಗ್ರಹಿಸಿದರು. ಈಗಾಗಲೇ ಹಿಂದಿನ ಸರ್ಕಾರ 2018-19ನೇ ಸಾಲಿನ ಬಜೆಟ್​ನಲ್ಲಿ ಉಚಿತ ಪಾಸ್ ನೀಡುವುದಾಗಿ ಹೇಳಿತ್ತು. ಆದ್ದರಿಂದಾಗಿ ಹಿಂದಿನ ಸರ್ಕಾರ ಹೇಳಿದಂತೆ ಈಗಿನ ಸರ್ಕಾರ ವಿದ್ಯಾರ್ಥಿಗಳಿಗೆ ಬಸ್ ಪಾಸ್​​ ನೀಡಬೇಕು. ಉಚಿತ ಬಸ್​ ಪಾಸ್​ ಸೌಲಭ್ಯ ನೀಡದಿದ್ದರೆ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀಳುತ್ತದೆ. ಕೂಡಲೇ ಉಚಿತ ಬಸ್​ ನೀಡುವಂತೆ ಸರ್ಕಾರಕ್ಕೆ ವಿದ್ಯಾರ್ಥಿಗಳು ಆಗ್ರಹಿಸಿದರು. ಒಂದು ವೇಳೆ ವಿದ್ಯಾರ್ಥಿಗಳ ಬೇಡಿಕೆಯನ್ನು ಸರ್ಕಾರ ಈಡೇರಿಸದಿದ್ದರೇ ಉಗ್ರ ಹೋರಾಟ ಮಾಡುವುದಾಗಿ ಎಬಿವಿಪಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv