ಕೂಡಿಗೆ ಸೈನಿಕ ಶಾಲೆಯಲ್ಲಿ ವಿದ್ಯಾರ್ಥಿಯ ಅನುಮಾನಾಸ್ಪದ ಸಾವು

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆಯಲ್ಲಿರುವ ಸೈನಿಕ ಶಾಲೆಯಲ್ಲಿ ಒದುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಪೂವಯ್ಯ, ಮಮತಾ ದಂಪತಿಯ 14 ವರ್ಷದ ಚಿಂಗಪ್ಪ, 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.

ಇನ್ನು ಶಿಕ್ಷಕರ ಕಿರುಕುಳದಿಂದಲೇ ಮಗ ಮೃತಪಟ್ಟಿದ್ದಾನೆ ಎಂದು ಶಿಕ್ಷಕರ ವಿರುದ್ಧ ಪೋಷಕರ ಆರೋಪ ಮಾಡುತ್ತಿದ್ದಾರೆ. ವಿದ್ಯಾರ್ಥಿ ಸಂಬಂಧಿಕರು ಬಾಲಕನನ್ನ ಕೊಲೆ ಮಾಡಲಾಗಿದೆ ಅಂತಾ ಕೂಡ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ಬಾಲಕನ ಮೃತದೇಹದ ಮರಣೋತ್ತರ ಪರೀಕ್ಷೆಗೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ತಪ್ಪಿತಸ್ಥರ ಬಂಧನ ಆಗುವವರೆಗೆ ಮೃತದೇಹ ತೆಗೆಯೋದಿಲ್ಲ ಪಟ್ಟು ಹಿಡಿದಿದ್ದಾರೆ . ಶಾಲೆ ಆಡಳಿತ ಮಂಡಳಿ ಈ ವರೆಗೂ ಆ ಘಟನೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಶಾಲೆಗೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv