ದಾವಣಗೆರೆ ವಿವಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಚಿತ್ರದುರ್ಗ : ಕೋಟೆ ನಾಡು ಚಿತ್ರದುರ್ಗದಲ್ಲಿ ಇಂದು ವಿದ್ಯಾಥಿಗಳು ದಾವಣಗೆರೆ ವಿವಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

ಬಿಎಸ್ಸಿ ವಿದ್ಯಾಥಿಗಳು ಮೊದಲನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಕೆಲ ವಿಷಯಗಳು ಪಾಸ್​ ಮಾಡಿಕೊಳ್ಳದೆ ಉಳಿದು ಕೊಂಡಿದ್ದರೆ ಅವರು ಮತ್ತೆ 6ನೆಯ ಸೆಮಿಸ್ಟರ್ ಬರೆಯುವ ಹಾಗಿಲ್ಲ ಎಂಬ ಪದ್ಧತಿಯ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ನಗರದ ಡಿಸಿ ವೃತ್ತದಲ್ಲಿ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವಂತೆ ಒತ್ತಾಯ ಹಾಕಿದ್ರು. ಆದ್ರೆ ಜಿಲ್ಲಾಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ್ರು, ಈ ವೇಳೆ ಜಿಲ್ಲಾಧಿಕಾರಿಗಳು ಬಂದು ವಿದ್ಯಾರ್ಥಿಗಳಿಗೆ ಆಗಿರುವ ಸಮಸ್ಯೆಯನ್ನ ಬೇಗ ಬಗೆಹರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.


Follow us on:

YouTube: firstNewsKannada Instagram: firstnews.tv Facebook: firstnews.tv Twitter: firstnews.tv