ಕೆಎಸ್ಆರ್‌ಟಿಸಿ ಬಸ್​ ಸಿಬ್ಬಂದಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಹುಬ್ಬಳ್ಳಿ: ಕೆಎಸ್ಆರ್‌ಟಿಸಿ ಬಸ್​ ಸಿಬ್ಬಂದಿ ವಿದ್ಯಾರ್ಥಿಗಳೊಂದಿಗೆ ದುರಾವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ ನೇತೃತ್ವದಲ್ಲಿ, ನಗರದ ಕಿಮ್ಸ್​ ಆಸ್ಪತ್ರೆಯ ಬಳಿ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟಿಸಿದರು. ಇದೇ ವೇಳೆ ಕೆಎಸ್ಆರ್‌ಟಿಸಿ ಅಧಿಕಾರಿಗಳು ಮತ್ತು ಬಸ್ ಚಾಲಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಾಕಷ್ಟು ವಿದ್ಯಾರ್ಥಿಗಳು ಈಗಾಗಲೇ ಬಸ್ ಪಾಸ್‌ಗಳನ್ನು ಪಡೆದಿಕೊಂಡಿದ್ದಾರೆ. ಹೀಗಿರುವಾಗ ಬಸ್ ಚಾಲಕರು, ಬಸ್​​ ನಿಲ್ಲಿಸಿ ವಿದ್ಯಾರ್ಥಿಗಳನ್ನು ಬಸ್​ ಒಳಗಡೆ ಹತ್ತಿಸಿಕೊಳ್ಳದೇ ದುರ್ವರ್ತನೆ ತೋರುತ್ತಿದ್ದಾರೆ. ಬಸ್ ಚಾಲಕರ ಈ ವರ್ತನೆಯಿಂದ ಸಾಕಷ್ಟು ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲಾ – ಕಾಲೇಜಿಗೆ ತೆರಳಲು ಆಗುತ್ತಿಲ್ಲ. ಹಾಗಾಗಿ ಕೂಡಲೇ ಕೆಎಸ್ಆರ್‌ಟಿಸಿ ಅಧಿಕಾರಿಗಳು ಈ ಸಮಸ್ಯೆಯನ್ನು ಸರಿಪಡಿಸಬೇಕು. ಒಂದು ವೇಳೆ ಸರಿಪಡಿಸದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv