ಮೂಲಸೌಕರ್ಯಗಳಿಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಬಳ್ಳಾರಿ: ಮುನ್ಸಿಪಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂಲಭೂತ ಸೌಕರ್ಯಗಳಿಗಾಗಿ ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.
2016 ರಲ್ಲಿ ಕಾಲೇಜಿನ ನೂತನ ಕಟ್ಟಡಕ್ಕೆ 164.10 ಲಕ್ಷ ರೂಪಾಯಿ ಬಳ್ಳಾರಿ ಜಿಲ್ಲಾಡಳಿತ ಬಿಡುಗಡೆ ಗೊಳಿಸಿತ್ತು. ಬಳ್ಳಾರಿ ನಿರ್ಮಿತ ಕೇಂದ್ರಕ್ಕೆ ಕಾಮಗಾರಿ ನೀಡಿದ್ದು, 2017 ಆಗಸ್ಟ್ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕಿತ್ತು. ಅವಧಿ ಮುಗಿದು 10 ತಿಂಗಳಾದರೂ ಕೇವಲ 10% ಕಾಮಗಾರಿ ನಡೆದಿದೆ. ಅಲ್ಲದೇ, ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ, ಪ್ರಯೋಗಾಲಯ ಇಲ್ಲದೇ ದಿನನಿತ್ಯ ಸಮಸ್ಯೆಗಳಲ್ಲಿಯೇ ತರಗತಿಗಳನ್ನು ಕೇಳುತ್ತಿದ್ದಾರೆ ಅಂತಾ ಆರೋಪಿಸಿ ಪ್ರತಿಭಟನೆ ನಡೆಸಿದ್ರು.
AIDSO ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ನಗರದ ರಾಯಲ್ ವೃತ್ತದ ಮೂಲಕ ಡಿ.ಸಿ ಕಚೇರಿಗೆ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದ್ರು. ಕಟ್ಟಡದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಅಂತಾ ಆಗ್ರಹಿಸಿದ ಪ್ರತಿಭಟನಾಕಾರರು ತಹಶೀಲ್ದಾರ್ ಮೆಹತಾ ರವರಿಗೆ ಮನವಿ ಪತ್ರ ಸಲ್ಲಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv