ಉಚಿತ ಬಸ್​ ಪಾಸ್​ಗಾಗಿ ಎಸ್​ಎಫ್​ಐ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ರಾಯಚೂರು: ಉಚಿತ ಬಸ್ ಪಾಸ್ ನಿಡುವಂತೆ ಒತ್ತಾಯಿಸಿ ಎಸ್ಎಫ್ಐ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ನಗರದಲ್ಲಿ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಪ್ರತಿಭಟನೆ ನಡೆದಿದೆ.

ದೇವದುರ್ಗ- ತಿಂಥಿಣಿ ರಾಜ್ಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ್ರು, ಇದ್ರಿಂದ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫೀಕ್ ಜಾಮ್ ಉಂಟಾಗಿ ವಾಹನ ಸಂಚಾರರು ಪರದಾಡುವಂತಾಯ್ತು. ಅಲ್ಲದೆ ಸಮಿಶ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ವಿದ್ಯಾರ್ಥಿಗಳು ತಮ್ಮ ಆಕ್ರೋಶ ಹೊರ ಹಾಕಿದ್ರು. ಯಾರಿಗು ತಾರತಮ್ಯ ಮಾಡದೆ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv