ಪ್ರೌಢಶಾಲೆಯ ಮುಖ್ಯ ಶಿಕ್ಷಕರ ವರ್ಗಾವಣೆ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಶಿರಸಿ: ಇಲ್ಲಿನ ಗಣೇಶ ನಗರದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ವರ್ಗಾವಣೆಯನ್ನು ಖಂಡಿಸಿ ಶಾಲೆಗೆ ಬೀಗ ಜಡಿದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ.ಹೆಚ್​​. ನಾಯ್ಕ್​ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರು. ಸರ್ಕಾರದ ಕ್ರಮ ಖಂಡಿಸಿ ವಿದ್ಯಾರ್ಥಿಗಳ ಜೊತೆಗೆ ಗ್ರಾಮದವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರೌಢಶಾಲೆಗೆ ಬಿಇಒ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv