ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸಿದ್ದ ಪಿಎಸ್ಐ, ಓರ್ವ ಕಾನ್ಸ್​ಟೆಬಲ್ ಅಮಾನತ್ತು

ತುಮಕೂರು: ಇಂದು ನಗರದಲ್ಲಿ ನಡೆದ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಪ್ರಕರಣದಲ್ಲಿ ಪೊಲೀಸರಿಂದ ಕರ್ತವ್ಯ ಲೋಪವಾಗಿದೆ. ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ವಿಫಲರಾಗಿರುವ ಪಿಎಸ್ಐ ರಾಘವೇಂದ್ರ, ಹಾಗೂ ಕಾನ್ಸ್‌ಟೆಬಲ್ ಸದಾನಂದಗೌಡರನ್ನು ಅಮಾನತ್ತು ಮಾಡಿ ಎಸ್ಪಿ ದಿವ್ಯಾ ಗೋಪಿನಾಥ್ ಆದೇಶಿಸಿದ್ದಾರೆ.
ಉಚಿತ ಬಸ್ ​ಪಾಸ್ ನೀಡುವಂತೆ ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ಎರಡು ದಿನಗಳಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ಕುರಿತಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಹೊಸ ಬಡಾವಣೆ ಠಾಣೆ ಪಿಎಸ್ಐ ರಾಘವೇಂದ್ರ ವಿಫಲರಾಗಿದ್ದಾರೆ. ಇದರಿಂದಲೇ ರೊಚ್ಚಿಗೆದ್ದ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ ಎಂದು ಎಸ್ಪಿ ದಿವ್ಯಾ ಗೋಪಿನಾಥ್ ತಿಳಿಸಿದ್ದಾರೆ.

ಲಾಠಿ ಚಾರ್ಜ್ ಪ್ರಕರಣಕ್ಕೆ ಹೊಸ ಟ್ವಿಸ್ಟ್
ವಿದ್ಯಾರ್ಥಿಗಳು ಪೂರ್ವಾನುಮತಿ ಪಡೆಯದೆ ಹೆದ್ದಾರಿ ತಡೆದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಮುಖಂಡನ‌ ಮೇಲೆ ಕೇಸ್ ದಾಖಲಿಸಲಾಗಿದೆ. ಎಬಿವಿಪಿ ಮುಖಂಡ ಚಂದನ್​ ಗೌಡ ಎನ್ನುವವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಚಂದನ್​ ಗೌಡನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಚಂದನ್ ಬಸ್ ಅಡಿ ನುಗ್ಗಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv