ಒಂದು ವಾರದಲ್ಲಿ ಬಸ್​ಪಾಸ್​ ನೀಡದಿದ್ರೆ ಹೋರಾಟದ ಎಚ್ಚರಿಕೆ

ಬೆಳಗಾವಿ: ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಬಸ್​ಪಾಸ್​ ನೀಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು ನಗರದ ಚೆನ್ನಮ್ಮ ವೃತ್ತದಿಂದ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು.ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ವಿದ್ಯಾರ್ಥಿಗಳ ಪ್ರೊಟೆಸ್ಟ್​​ಗೆ ಶಾಸಕರಾದ ಅಭಯ್ ಪಾಟೀಲ್ ಮತ್ತು ಉತ್ತರ ಕ್ಷೇತ್ರದ ಅನಿಲ ಬೆನಕೆ ಸಾಥ್​ ನೀಡಿದರು. ಒಂದು ವಾರದಲ್ಲಿ ಉಚಿತ ಪಾಸ್ ನೀಡದಿದ್ದರೆ, ರಾಜ್ಯಾದ್ಯಂತ ಉಗ್ರವಾದ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv