ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್​ಪಾಸ್​ಗೆ ಆಗ್ರಹಿಸಿ ಪ್ರತಿಭಟನೆ

ಕೊಪ್ಪಳ: ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಪಾಸ್ ನೀಡುವಂತೆ ಆಗ್ರಹಿಸಿ ಇಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಎಸ್​ಎಫ್​ಐ ನೇತೃತ್ವದಲ್ಲಿ ಮಹಿಳಾ ಕಾಲೇಜಿನಿಂದ ತಹಶೀಲ್ದಾರ್ ಕಚೇರಿವರೆಗೂ ಪ್ರತಿಭಟನಾ ಱಲಿ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಈ ವೇಳೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv