ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಂದೆಯೊಬ್ಬ ಮೂವರು ಮಕ್ಕಳಿಗೆ ವಿಷ ಉಣಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ನಿಡಗೋಡು ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ನಾಲ್ವರೂ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದ ಪತಿ ಲೋಕೇಶ್​ (40), ಆತ್ಮಹತ್ಯೆ ಮಾಡಿಕೊಳ್ಳುವ ಕೃತ್ಯಕ್ಕೆ ಮುಂದಾಗಿದ್ದರು. ಮಕ್ಕಳಾದ ಸೃಷ್ಟಿ (14), ಸೇಹ್ನ (12), ಮಂಜುನಾಥ್ (8)ಗೆ ವಿಷ ನೀಡಿದ್ದಾರೆ. ನಂತರ ತಾವೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಇದು ಅಲ್ಲಿನ ಸ್ಥಳೀಯರ ಗಮನಕ್ಕೆ ಬರುತ್ತಿದ್ದಂತೆ ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ನಾಲ್ವರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv