ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ದಿನೇಶ್​ರನ್ನು ಬೆಂಬಲಿಸಿ-ಆರ್.ಪ್ರಸನ್ನ ಕುಮಾರ್ ಮನವಿ

ಶಿವಮೊಗ್ಗ: ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ದಿನೇಶ್ ಅವರನ್ನು ಬೆಂಬಲಿಸುವಂತೆ ಮಾಜಿ ಶಾಸಕ ಆರ್.ಪ್ರಸನ್ನ ಕುಮಾರ್ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಪಿ.ದಿನೇಶ್, ಪದವೀಧರ ಸಮಸ್ಯೆ ಹಾಗೂ ಅಗತ್ಯಗಳಿಗೆ ಸ್ಪಂದಿಸಿದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ ಕೆಲವೇ ಮತಗಳ ಅಂತರದಲ್ಲಿ ಸೋತ ನಂತರವೂ ಸುಮ್ಮನೆ ಕೂರದೆ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ವಿಶ್ವಾಸ ಗಳಿಸಿದ್ದಾರೆ ಅಂತಾ ಹೇಳಿದ್ರು.
ಅಭ್ಯರ್ಥಿ ಎಸ್.ಪಿ.ದಿನೇಶ್ ಮಾತನಾಡಿ, ಬಿಜೆಪಿ ಅಭ್ಯರ್ಥಿ ಆಯನೂರು ಮಂಜುನಾಥ್ ಹೇಳಿಕೆ ಅರ್ಥವಿಲ್ಲದ್ದು. ನಾನು ಶಿಕ್ಷಕ ಕ್ಷೇತ್ರದ ನಮ್ಮ ಪಕ್ಷದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಪರ ಮತ ಕೇಳದೆ ಜೆಡಿಎಸ್ ಅಭ್ಯರ್ಥಿ ಪರ ಮತ ಯಾಚಿಸುತ್ತಿದ್ದೇನೆ ಎಂಬ ಮಾತು ಸರಿಯಲ್ಲ. ಹಾಗೆ ನೋಡಿದರೆ ಆಯನೂರು ಮಂಜುನಾಥ್ ಅವರೆ ತಮ್ಮ ಪಕ್ಷದ ಅಭ್ಯರ್ಥಿ ಬದಲಿಗೆ ಕಸಾಪ ಮಾಜಿ ಅಧ್ಯಕ್ಷರೊಂದಿಗೆ ಸೇರಿಕೊಂಡು ಪಕ್ಷೇತರ ಅಭ್ಯರ್ಥಿ ಪರ ಮತ ಯಾಚಿಸುತ್ತಿದ್ದಾರೆ ಅಂತಾ ಆರೋಪಿಸಿದ್ರು.