ಸತೀಶ್​​ ಜಾರಕಿಹೊಳಿಗೆ ಮಂತ್ರಿಗಿರಿ ತಪ್ಪಿದ್ದಕ್ಕೆ ಬೆಂಬಲಿಗರ ಪ್ರೊಟೆಸ್ಟ್​​

ಬೆಳಗಾವಿ: ಸಮ್ಮಿಶ್ರ ಸರ್ಕಾರದ ಉಭಯ ಪಕ್ಷಗಳ ಸಂಭಾವ್ಯ ಸಚಿವರ ಪಟ್ಟಿ ಹೊರಬಿದ್ದಿದೆ. ಮಂತ್ರಿ ಸ್ಥಾನದಿಂದ ವಂಚಿತರಾದ ಶಾಸಕರು ನಿರಾಸೆಗೊಂಡಿದ್ದಾರೆ. ತಮ್ಮ ನಾಯಕರಿಗೆ ಮಂತ್ರಿ ಸ್ಥಾನ ಸಿಗದಿರುವುದು ಬೆಂಬಲಿಗರನ್ನು ಕೆರಳಿಸಿದೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಯಮಕನಮರಡಿ ಕ್ಷೇತ್ರದ ಕಾಂಗ್ರೆಸ್​​ ಶಾಸಕ ಸತೀಶ್​ ಜಾರಕಿಹೊಳಿಗೆ ಕೊನೆ ಗಳಿಗೆಯಲ್ಲಿ ಮಂತ್ರಿ ಸ್ಥಾನ ತಪ್ಪಿದ್ದರಿಂದ ಬೆಂಬಲಿಗರು ನಗರದ ಚೆನ್ನಮ್ಮ ವೃತ್ತದಲ್ಲಿ ಟೈಯರ್​​​​​​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಈ ವೇಳೆ ಸಮ್ಮಿಶ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮತ್ತೊಂದೆಡೆ, ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ, ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಲಹೊತ್ತು ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv