ಮನೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ: ನಾಲ್ವರಿಗೆ ಗಂಭೀರ ಗಾಯ

ಕಲಬುರ್ಗಿ: ಮನೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನಗರದ ಹುಸೇನಿ ಗಾರ್ಡನ್​​ ಕಾಲೋನಿಯಲ್ಲಿ ನಡೆದಿದೆ.
ಅಕ್ಬರ್​​(37), ಶನ್ನು (35). ಮಕ್ಕಳಾದ ಮಹ್ಮದ್ ಯಾಸಿನ್ (13), ಸಾನಿಯಾ (10) ಗಾಯಗೊಂಡಿವರು. ಗಾಯಗೊಂಡವರನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಫೋಟ ಹೇಗೆ ಸಂಭವಿಸಿದೆ ಎಂಬುದು ಇನ್ನು ತಿಳಿದು ಬಂದಿಲ್ಲ. ಸಿಲಿಂಡರ್​​ ಸ್ಫೋಟದಿಂದ ಅವಗಡ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ನ್ಯೂ ರಾಘವೇಂದ್ರ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂರ್ಪಕಿಸಿ: contact@firstnews.tv