ತಹಶೀಲ್ದಾರ್ ಕಚೇರಿಗೆ ಆಕಸ್ಮಿಕ ಬೆಂಕಿ!

ಕೊಪ್ಪಳ: ಜಿಲ್ಲೆಯ ಗಂಗಾವತಿ ತಹಶೀಲ್ದಾರ್ ಕಚೇರಿ ಆಕಸ್ಮಿಕ ಬೆಂಕಿಗಾಹುತಿಯಾಗಿದೆ. ಲ್ಯಾಪ್‌ಟಾಪ್ ಸೇರಿದಂತೆ ದಾಖಲೆಗಳು ಬೆಂಕಿಗಾಹುತಿಯಾಗಿವೆ.
ಚುನಾವಣಾ ವಿಭಾಗದ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದೆ. ಸ್ಥಳಕ್ಕೆ ತಹಶೀಲ್ದಾರ್ ಸಂತೋಷ ರಾಣಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ:contact@firstnews.tv