ಹಕ್ಕು ಚಲಾಯಿಸಿದ ವಿಧಾನಪರಿಷತ್ ಸದಸ್ಯೆ ತಾರಾ ಅನುರಾಧ

ಬೆಂಗಳೂರು: ಜಯನಗರ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸುಗೊಂಡಿದೆ. ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಜೆಪಿ ನಗರದ ಎವಿ ಎಜುಕೇಶನ್ ಸೊಸೈಟಿ ಸ್ಕೂಲಿನ ಬೂತ್​​ ನಂಬರ್ 173 ರಲ್ಲಿ ಮತಚಲಾಯಿಸಿದರು. ಕುಟಂಬ ಸದಸ್ಯರೊಂದಿಗೆ ಆಗಮಿಸಿದ ತಾರಾ ಅನುರಾಧ ಮತದಾನ ಮಾಡಿದರು. ಬಿಜೆಪಿ ಅಭ್ಯರ್ಥಿ ಬಿ.ಎನ್​.ವಿಜಯಕುಮಾರ್​ರವರ ಅಕಾಲಿಕ ಮರಣದಿಂದಾಗಿ ಮುಂದೂಡಲ್ಪಟ್ಟಿದ್ದ ಜಯನಗರ ಕ್ಷೇತ್ರದ ವಿಧಾನಸಭೆ ಚುನಾವಣೆ ಇಂದು ನಡೆಯುತ್ತಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv