ಶಬರಿಮಲೆ ವಿವಾದ: ಪರಿಹಾರ ಹುಡುಕಲು ಟಿಡಿಬಿ ಮಹತ್ವದ ಸಭೆ

ಪಂಬಾ: ಧಾರ್ಮಿಕ ಕ್ಷೇತ್ರ ಶಬರಿಮಲೆ ಇದೀಗ ಅಕ್ಷರಶಃ ರಣಾಂಗಣವಾಗಿದ್ದು, ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂಬ ಸುಪ್ರೀಂ ಕೋರ್ಟ್ ತೀರ್ಪಿಗೆ ವ್ಯಾಪಕ ಆಕ್ರೋಶ ಕೂಡ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆ ಟ್ರಾವಂಕೂರು ದೇವಸ್ವಮ್ ಮಂಡಳಿ ಇಂದು ಮಹತ್ವದ ಸಭೆ ನಡೆಸಲಿದೆ. ತಿರುವನಂತಪುರಂನಲ್ಲಿ ಈ ಸಭೆ ಕರೆಯಲಾಗಿದ್ದು, ಅಯ್ಯಪ್ಪ ಸ್ವಾಮಿಯ ಸನ್ನಿಧಿಯಲ್ಲಿ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮಹತ್ವದ ನಿರ್ಣಯ ಸಭೆಯಲ್ಲಿ ಕೈಗೊಳ್ಳಲಾಗುತ್ತೆ. ಮಹಿಳೆಯರಿಗೆ ಸ್ನೇಹಪರ ಪರಿಹಾರ ಹುಡುಕಲೆಂದೆ ಈ ಸಭೆ ಕರೆಯಲಾಗಿದೆ ಎಂದು ಟಿಡಿಬಿ ಅಧ್ಯಕ್ಷ ಎ.ಪದ್ಮಕುಮಾರ್​ ಹೇಳಿದ್ದಾರೆ.
ಕೇರಳದಲ್ಲಿ ನಡೆಯುತ್ತಿರುವ ಮಹಿಳೆಯರ ಪ್ರತಿಭಟನೆ ಅಂತ್ಯಗೊಳಿಸಲು ಮತ್ತು ಸಹಜ ಸ್ಥಿತಿಗೆ ತರಲು ಬೋರ್ಡ್ ಈ ತಿರ್ಮಾಕ್ಕೆ ಬಂದಿದೆ. ಈ ವಿವಾದಕ್ಕೆ ಮಂಡಳಿ ಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗಿಲ್ಲ ಎಂದು ಎ.ಪದ್ಮಕುಮಾರ್ ತಿಳಿಸಿದ್ರು.

ಸುಪ್ರೀಂಗೆ ಮರುಪರಿಶೀಲನೆ ಅರ್ಜಿ..!
ಶಬರಿಮಲೆಯಲ್ಲಿ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅಯ್ಯಪ್ಪ ಭಕ್ತರು ವಿರೋಧಿಸುತ್ತಿದ್ದಾರೆ. ಸುಪ್ರೀಂಕೋರ್ಟ್ ತೀರ್ಪನ್ನ ಮರುಪರಿಶೀಲಿಸುವಂತೆ ಮತ್ತೆ ಮೇಲ್ಮನವಿ ಸಲ್ಲಿಸಲಾಗುತ್ತೆ. ಇದರಿಂದ ಪ್ರತಿಭಟನೆ ಕೊನೆಯಾಗಬಹುದು ಎಂದು ಟಿಡಿಬಿ ಹೇಳಿದೆ.
ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡುವ ಬಗ್ಗೆ ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸುವ ಹಿನ್ನೆಲೆ ಕಳೆದ ವಾರ ಮಂಡಳಿ, ಸದಸ್ಯರ ನಿರ್ಣಾಯಕ ಸಭೆ ನಡೆಸಿತ್ತು. ಆದರೆ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಮತ್ತೆ ಸಭೆ ನಡೆಯಲಿದ್ದು, ರಾಜ್ಯದಲ್ಲಿ 1,200 ಕ್ಕೂ ಹೆಚ್ಚು ದೇವಸ್ಥಾನಗಳನ್ನು ನಿರ್ವಹಿಸುತ್ತಿರುವ ಟಿಡಿಬಿ, ಅಯ್ಯಪ್ಪ ದೇವಸ್ಥಾನ ಸೇರಿದಂತೆ, ಎಲ್ಲಾ ದೇವಸ್ಥಾನದ ಮಧ್ಯಸ್ಥರ ಜೊತೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಲಿದ್ದೇವೆ ಅಂತ ಟಿಡಿಬಿ ಹೇಳಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: conatct@firstnews.tv