ಶಿಕ್ಷಕನಿಗೆ ಸಾವು ತಂದ ರಸ್ತೆ ವಿಭಜಕ

ದೊಡ್ಡಬಳ್ಳಾಪುರ: ಬೈಕ್ ಅಪಘಾತದಿಂದ ಶಿಕ್ಷಕ ಸಾವನ್ನಪ್ಪಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ದೈಹಿಕ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ (54) ಸಾವನ್ನಪ್ಪಿರುವ ದುರ್ದೈವಿ. ಮಂಜುನಾಥ್ ತಮ್ಮ ಬೈಕ್​ನಲ್ಲಿ ವೇಗವಾಗಿ ಬರುತ್ತಿದ್ದ ವೇಳೆ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿರುವುದರಿಂದ ಸಾವನ್ನಪ್ಪಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಮದಗೊಂಡನಹಳ್ಳಿ ಕ್ರಾಸ್‌ನ ರೈ ಕಾಲೇಜು ಬಳಿ ಘಟನೆ ನಡೆದಿದೆ. ತಾಲೂಕಿನ ಮದಗೊಂಡನಹಳ್ಳಿ ನಿವಾಸಿ ಮಂಜುನಾಥ್ ಅಲ್ಲಿನ ಅರಳುಮಲ್ಲಿಗೆ ಸರಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *