ಶಿಕ್ಷಕರ ಕ್ಷೇತ್ರ ಕಾಂಗ್ರೆಸ್, ಬಿಜೆಪಿ, ಜೆಡಿಎಸ್​​ಗೆ ತಲಾ ಒಂದೊಂದು

ವಿಧಾನಪರಿಷತ್​ಗೆ ನಡೆದ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣ ಸ್ವಾಮಿ ಗೆಲುವು ಸಾಧಿಸಿದ್ದಾರೆ. ನಾರಾಯಣಸ್ವಾಮಿ 2 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ರಮೇಶ್ ಬಾಬು ವಿರುದ್ಧ ನಾರಾಯಣಸ್ವಾಮಿ ಗೆಲುವಿನ ನಗೆ ಬೀರಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಉಪ ಸಭಾಪತಿ, ಜೆಡಿಎಸ್‌ನ ಮರಿತಿಬ್ಬೇಗೌಡರು ವಿಜಯ ಪತಾಕೆ ಹಾರಿಸಿದ್ದಾರೆ. ಈ ಮೂಲಕ ಮರಿತಿಬ್ಬೇಗೌಡ ಸತತವಾಗಿ ನಾಲ್ಕನೇ ಬಾರಿ ವಿಧಾನ ಪರಿಷತ್​ಗೆ ಆಯ್ಕೆಯಾಗಿದ್ದಾರೆ. ಎರಡನೇ ಪ್ರಾಶಸ್ತ್ಯ ಮತಗಳ ಎಣಿಕೆ ಮುಕ್ತಾಯದ ಬಳಿಕ 360 ಮತಗಳ ಅಂತರದಿಂದ ಕಾಂಗ್ರೆಸ್​ನ ಅಭ್ಯರ್ಥಿ ಎಂ.‌ಲಕ್ಷ್ಮಣ್​ಗೆ ಸೋಲುಣಿಸಿದ್ದಾರೆ.
ಮರಿತಿಬ್ಬೇಗೌಡರ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ, ಮತ ಎಣಿಕೆ ಕೇಂದ್ರದ ಮುಂಭಾಗದಲ್ಲಿ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿದ್ರು. ಪಡುವಾರಹಳ್ಳಿ ಮತ ಕೇಂದ್ರದ ಮುಂಭಾಗದಲ್ಲಿ ಸಂಭ್ರಮಾಚರಣೆ ಮಾಡಿದ್ರು.

ಇತ್ತ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮತದಾರರು ಜೆಡಿಎಸ್ ಕೈ ಹಿಡಿದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಭೋಜೆಗೌಡ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ವಿಜಯಮಾಲೆ ಧರಿಸಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆಯಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಭೋಜೆಗೌಡ, ಎರಡನೇ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಗೆಲುವು ದಾಖಲಿಸಿದ್ರು. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪ್ರಬಲ ಪೈಪೋಟಿ ನೀಡಿದ್ರೂ, ಅಂತಿಮವಾಗಿ ಗೆಲುವು ದಕ್ಕಿದ್ದು ಬೋಜೆಗೌಡಗೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ:cantact@firstnews.tv