ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ತೇಜಸ್ವಿ ಪಟೇಲ್‌ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ?

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಕಸರತ್ತು ಮುಂದುವರೆದಿದೆ. ಈ ಹಿಂದೆ ಶಾಮನೂರು ಶಿವಶಂಕರಪ್ಪಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿತ್ತು. ಆದ್ರೆ ಶಾಮನೂರು ಶಿವಶಂಕರಪ್ಪ ಚುನಾವಣೆ ಸ್ಪರ್ಧೆಗೆ ಹಿಂದೇಟು ಹಾಕಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ  ರೈತ ನಾಯಕ ಹಾಗೂ ಜಿಲ್ಲಾ ಪಂಚಾಯ್ತಿ ಕಾಂಗ್ರೆಸ್ ಸದಸ್ಯ ತೇಜಸ್ವಿ ಪಟೇಲ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೇಜಸ್ವಿ ಪಟೇಲ್‌ಗೆ ಬುಲಾವ್ ನೀಡಿದ್ದು. ದೂರವಾಣಿ ಕರೆ ಮಾಡಿ ತೇಜಸ್ವಿ ಪಟೇಲ್‌ಗೆ ಬೆಂಗಳೂರಿಗೆ ಬರುವಂತೆ ಆಹ್ವಾನಿಸಿದ್ದಾರೆ ಎಂಬ ಮಾಹಿತಿ ದೊರಕಿದೆ. ನಿನ್ನೆ ತೇಜಸ್ವಿ ಪಟೇಲ್ ಬೆಂಗಳೂರಿಗೆ ತೆರಳಿದ್ದಾರೆ. ಇಂದು ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತೆ. ಎಲ್ಲವೂ ಸರಿ ಎನಿಸಿದರೆ ತೇಜಸ್ವಿ ಸ್ಪರ್ಧೆ ಮಾಡೋದು ಬಹುತೇಕ ಖಚಿತವಾದ್ದಂತೆ. ತೇಜಸ್ವಿ ಪಟೇಲ್, ದಿವಂಗತ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್ ಅಣ್ಣನ ಪುತ್ರರಾಗಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv