ಕಟ್ಟಡದಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

ಚಳ್ಳಕೆರೆ: ನಿರ್ಮಾಣ ಹಂತದ ಕಟ್ಟಡದಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿದ ಘಟನೆ ಚಳ್ಳಕೆರೆ ನಗರದಲ್ಲಿ ನಡೆದಿದೆ. ನಗರದ ಚಿತ್ರದುರ್ಗ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಬಾಬು ಜಗಜೀವನ್ ರಾಮ್ ಭವನದ ಕಟ್ಟಡದಲ್ಲಿ ಈ ಅವಘಡ ಸಂಭವಿಸಿದೆ. ಚಳ್ಳಕೆರೆ ನಗರ ನಿವಾಸಿ ನಾಗರಾಜ್ (37) ಮೃತ ದುರ್ದೈವಿ. ಕಾರ್ಮಿಕ 70 ಅಡಿ ಎತ್ತರದಿಂದ ಬಿದ್ದಿರುವುದರಿಂದ ಸಾವನ್ನಪ್ಪಿದ್ದಾನೆ. ಈ ಕುರಿತಂತೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂರ್ಪಕಿಸಿ: contact@firstnews.tv