ಕಾಲುಜಾರಿ ನೀರಿಗೆ ಬಿದ್ದು ಯುವತಿ ಸಾವು

ಧಾರವಾಡ: ಕಾಲು ಜಾರಿ ಕೆರೆಯಲ್ಲಿ ಬಿದ್ದು ಯುವತಿ ಸಾವನ್ನಪಿದ ಘಟನೆ ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದಲ್ಲಿ ನಡೆದಿದೆ. ನೀಲವ್ವ ಹೊನ್ನಾಪುರ (18) ಮೃತ ಯುವತಿ. ಯುವತಿ ಕೆರೆಯಲ್ಲಿ ಬಟ್ಟೆ ಒಗೆಯುತ್ತಿದ್ದಾಗ ಕಾಲುಜಾರಿ ನೀರಿನೊಳಗೆ ಬಿದ್ದಿದ್ದಾಳೆ. ಈಜು ಬರದ ಕಾರಣ ಯುವತಿ ನೀರಿನಲ್ಲಿ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.