ಕಾಲು ಜಾರಿ ಕೆರೆಗೆ ಬಿದ್ದು ಬಾಲಕರ ಸಾವು..!

ತುಮಕೂರು: ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರು ಬಾಲಕರು ಸಾವನಪ್ಪಿರುವ ಘಟನೆ ತುಮಕೂರು‌ ಜಿಲ್ಲೆ ಶಿರಾ ತಾಲ್ಲೂಕಿನ ಹಳೆ ಬಿಜ್ಜನಬೆಳ್ಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿನ ಕೆರೆಯಲ್ಲಿ ನಾಯಿ ತೊಳೆಯಲು ಹೋಗಿದ್ದ ಸಚಿನ್ ಹಾಗೂ ಹರೀಶ್ ಎಂಬ ಬಾಲಕರು ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ. ಈ ಕುರಿತು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv