ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲಿಗೆ ಅಪಪ್ರಚಾರ ಹಾಗೂ ಹಣ ಕಾರಣ

ಶಿವಮೊಗ್ಗ: ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲಿಗೆ ಬಿಜೆಪಿಯವರ ಅಪಪ್ರಚಾರ ಹಾಗೂ ಹಣವೇ ಕಾರಣವಾಯಿತು. ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಸರಿಯಾಗಿ ಪ್ರಚಾರ ನಡೆಸದೇ ಇರುವುದು ಸಹ ಸೋಲಿಗೆ ಕಾರಣವಾಯಿತು ಅಂತಾ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಈ ಕುರಿತಂತೆ ಮಾತನಾಡಿದ ಅವರು, ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಮೈತ್ರಿ ಸರ್ಕಾರ ಐದು ವರ್ಷ ಪೂರೈಕೆ ಮಾಡುತ್ತದೆ. ಮಂತ್ರಿ ಮಂಡಲ ರಚನೆಯಲ್ಲಿ ಪೈಪೋಟಿ ಸಹಜ, ಅದನ್ನು ಪರಿಹರಿಸಿ ಮಂತ್ರಿ ಮಂಡಲ ರಚನೆ ಮಾಡಲಾಗುತ್ತದೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಮೈತ್ರಿ ಮಾಡಿಕೊಳ್ಳಲಾಗಿದೆ. ನಮ್ಮ ಜಿಲ್ಲೆ ಹಾಗೂ ರಾಜ್ಯದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡುತ್ತದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv