ಸಾಲಬಾಧೆ ತಾಳದೇ ರೈತ ಆತ್ಮಹತ್ಯೆ

ತುಮಕೂರು: ಸಾಲಬಾಧೆಯಿಂದ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧುಗಿರಿ ತಾಲೂಕಿನ ಚಿಕ್ಕಮಾಲೂರಿನಲ್ಲಿ ನಡೆದಿದೆ. ತಾಲೂಕಿನ ಚಿಕ್ಕಮಾಲೂರು ಗ್ರಾಮದ ವೀರಣ್ಣ ಮೃತ ರೈತ.
ವೀರಣ್ಣ ಕೈಸಾಲ ಸೇರಿ ವಿವಿಧ ಬ್ಯಾಂಕ್​ಗಳಲ್ಲಿ ಸುಮಾರು ₹ 4 ಲಕ್ಷ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಸಾಲ ತೀರಿಸಲಾಗದ ಪರಿಸ್ಥಿತಿಯಲ್ಲಿದ್ದ ವೀರಣ್ಣ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತಂತೆ ಕೊಡಿಗೇನಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv