ಲೋಕಸಭಾ ಉಪಚುನಾವಣೆ ನಡೆಯುತ್ತಾ? ಹೈಕೋರ್ಟ್​ ನೋಟಿಸ್ ಯಾರಿಗೆ?

ಬೆಂಗಳೂರು: ಶಿವಮೊಗ್ಗ, ಮಂಡ್ಯ ಹಾಗೂ ಬಳ್ಳಾರಿ ಲೋಕಸಭಾ ಉಪಚುನಾವಣೆಯನ್ನು ರದ್ದು ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಎಸ್​ ಯಡಿಯೂರಪ್ಪ, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಿ.ಎಸ್​ಪುಟ್ಟರಾಜು ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಶ್ರೀರಾಮುಲು ತಮ್ಮ ಲೋಕಸಭಾ ಸದಸ್ಯತ್ವಕ್ಕೆ (ಸಂಸದ ಸ್ಥಾನಕ್ಕೆ) ರಾಜೀನಾಮೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ, ಈ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿ ದಿನಾಂಕವನ್ನೂ ನಿಗದಿ ಮಾಡಿತ್ತು. ಆದರೆ, 2019ರ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಇಷಕ್ಕಾಗಿ ಚುನಾವಣೆ ನಡೆಸುವುದು ಅನಾವಶ್ಯಕ ಅಂತಾ ರಮೇಶ್ ನಾಯ್ಕ್, ಎ.ಪಿ.ರಂಗನಾಥ್ ಸೇರಿ ಇನ್ನೂ ಮೂವರು ಈ ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆ ರದ್ದು ಕೋರಿ ಪಿಐಎಲ್ ಸಲ್ಲಿಸಿದ್ದರು.

ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದ್ದು, ಅರ್ಜಿ ಸಂಬಂಧ ಉತ್ತರ ನೀಡುವಂತೆ ಸೂಚಿಸಿದೆ. ಅಲ್ಲದೇ ವಿಚಾರಣೆಯನ್ನು ಅಕ್ಟೋಬರ್ 29 ಕ್ಕೆ ಮುಂದೂಡಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv