ನನ್ನ ಮುಂದಿನ ಸ್ಥಾನ ಮಾನವನ್ನು ಪಕ್ಷ ನಿರ್ಧರಿಸುತ್ತದೆ-ಡಿ. ಎಚ್.ಶಂಕರಮೂರ್ತಿ

ಶಿವಮೊಗ್ಗ: ನನ್ನ ಮುಂದಿನ ಸ್ಥಾನ ಮಾನವನ್ನು ಪಕ್ಷ ನಿರ್ಧರಿಸುತ್ತದೆ. ಪಕ್ಷದ ತೀರ್ಮಾನದಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಸಭಾಪತಿ ಡಿ. ಎಚ್.ಶಂಕರಮೂರ್ತಿ ಹೇಳಿದ್ದಾರೆ. ನಗರದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೊಮ್ಮೆ ರಾಜ್ಯಪಾಲರ ಹುದ್ದೆ ಸಿಕ್ಕರೆ ಅದನ್ನು ನಿಭಾಯಿಸುತ್ತೇನೆ ಅಂತಾ ಹೇಳಿದ್ದಾರೆ. ಸಭಾಪತಿ ಹುದ್ದೆ ಜವಾಬ್ದಾರಿ ಅರಿತು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಲುವಾಗಿ ಈ ಚುನಾವಣೆಯಲ್ಲಿ ನಾನು ಕೆಲಸ ಮಾಡಿಲ್ಲ. ಅಲ್ಲದೇ, ವಯಸ್ಸಾದ ಹಿನ್ನೆಲೆಯಲ್ಲಿ ಚುನಾವಣೆ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ. ಇನ್ನು, ನನಗೆ ಸಾಕಷ್ಟು ಅವಕಾಶ ಸಿಕ್ಕಿದ್ದು ಹೊಸಬರಿಗೆ ಅವಕಾಶ ನೀಡುವಂತೆ ಮೂರ್ನಾಲ್ಕು ತಿಂಗಳ ಹಿಂದೆ ಪಕ್ಷಕ್ಕೆ ತಿಳಿಸಿದ್ದೆ. ಆದರೆ ಸಕ್ರಿಯ ರಾಜಕಾರಣದಿಂದ ದೂರವಿರುವುದಿಲ್ಲ ಅಂತಾ ಸ್ಪಷ್ಟ ಪಡಿಸಿದ್ರು.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv