ಬೆಳಗ್ಗೆ ಹಲ್ಲೆಗೊಳಗಾಗಿದ್ದ ವ್ಯಕ್ತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು..!

ಶಿವಮೊಗ್ಗ: ಹಾಡಹಗಲೇ ವ್ಯಕ್ತಿ ಯೋರ್ವನಿಗೆ ಮಚ್ಚಿನಿಂದ ಹಲ್ಲೆ ಮಾಡಲಾಗಿತ್ತು. ಹಲ್ಲೆಗೊಳಗಾದ ವ್ಯಕ್ತಿ ಪ್ರಭು ಮೆಗ್ಗಾನ್ ಆಸ್ಪತ್ರೆ ಯಲ್ಲಿ ಸಾವನ್ನಪ್ಪಿದ್ದಾನೆ. ನಗರದ ವಿದ್ಯಾ ನಗರ ನಿವಾಸಿ ಪ್ರಭು ಮೇಲೆ ಇಂದು ಬೆಳಿಗ್ಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಹಲ್ಲೆ ಮಾಡಿದ್ದ ಆರೋಪಿ ರವಿ ಪರಾರಿಯಾಗಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತಂತೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv