ಆಡುತ್ತಿದ್ದ ಬಾಲಕನ ಮೇಲೆ ಹಂದಿ ದಾಳಿ..!

ಹುಬ್ಬಳ್ಳಿ: ಆಟವಾಡುತ್ತಿದ್ದ ಬಾಲಕನ ಮೇಲೆ ಹಂದಿಯೊಂದು ಏಕಾಏಕಿ ದಾಳಿ ಮಾಡಿರುವ ಘಟನೆ, ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದಲ್ಲಿ ನಡೆದಿದೆ. 8 ವರ್ಷದ ಗುಫ್ರಾನ್ ಬಸ್ಸಾಪೂರ ಎಂಬ ಬಾಲಕ ಆಟವಾಡುತ್ತಿದ್ದಾಗ ಘಟನೆ ನಡೆದಿದ್ದು, ಆತನ ಮುಖ, ಕೈ, ತಲೆಗೆ ಗಾಯಗಳಾಗಿವೆ. ಗಾಯಗೊಂಡ ಬಾಲಕನನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಳ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv