ಪೊಲೀಸ್ ಭಯದಿಂದ ಬೈಕ್​ನಿಂದ ಬಿದ್ದು ಗಾಯಗೊಂಡ ಯುವಕ

ಶಿವಮೊಗ್ಗ: ಟ್ರಾಫಿಕ್​ ಪೊಲೀಸ್​ ಒಬ್ಬರು ಹೆಲ್ಮೆಟ್​ ಹಾಕದಿರುವ ಯುವಕನನ್ನ ಹಿಡಿಯಲು ಯತ್ನಿಸಿದ್ದು, ಈ ವೇಳೆ ಯುವಕ ಬೈಕ್​ನಿಂದ ಬಿದ್ದು ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನಗರದ ದುರ್ಗಿ ಗುಡಿಯ ಬಳಿ ಈ ಘಟನೆ ನಡೆದಿದ್ದು, ಗಾಯಗೊಂಡ ಯುವಕನನ್ನ ಸಾರ್ವಜನಿಕರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಟ್ರಾಫಿಕ್​ ಪೊಲೀಸರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪಶ್ಚಿಮ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv